ಬೆಳಗಾವಿ:
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದು ಶುಭ ಕೋರಿದರು.
ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಜಮೀರ್ ಅಹಮದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.