
Satish Jarkiholi has all qualifications to become Chief Minister: Lakshmi Hebbalkar
ಬೆಳಗಾವಿ:
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ವೇಳೆ ಭಾನುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.