ನವದೆಹಲಿ:
ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪಕ್ಷ ಶುಕ್ರವಾರ ಘೋಷಿಸಿದೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸತೀಶ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ನೇಮಿಸಲು ಅನುಮೋದನೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ತಿಳಿಸಿದ್ದಾರೆ.
ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ನಿಗದಿಯಾಗಿದೆ.