Home ಸಿನಿಮಾ ಡ್ರಗ್ಸ್ ಪ್ರಕರಣ: ನಟಿ ರಾಗಿಣಿಗೆ ಜಾಮೀನು

ಡ್ರಗ್ಸ್ ಪ್ರಕರಣ: ನಟಿ ರಾಗಿಣಿಗೆ ಜಾಮೀನು

124
0

ನವದೆಹಲಿ/ಬೆಂಗಳೂರು:

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ದೊರಕಿದ್ದು, ಈ ಮೂಲಕ 140 ದಿನಗಳ ಜೈಲುವಾಸ ಅಂತ್ಯವಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.

ಹಲವು ಮಂದಿ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪಿಗಳ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 4ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು. UNI

LEAVE A REPLY

Please enter your comment!
Please enter your name here