ಬೆಂಗಳೂರು/ನವದೆಹಲಿ:
ಮುಂದಿನ ಆರು ವಾರಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸುವಂತೆ ಸೂಚಿಸಿದ್ದ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ, ಚುನಾವಣಾ ಆಯೋಗ ಮತ್ತು ಮೂಲ ಅರ್ಜಿದಾರರಾದ ಎಂ.ಶಿವರಾಜು, ಅಬ್ದುಲ್ ವಾಜಿದ್ ಮತ್ತು ರವಿ ಜಗನ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಡಿ.4ರಂದು ಹೈಕೋರ್ಟ್, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಟನ್ ಮೂರನೇ ತಿದ್ದುಪಡಿ ಕಾಯ್ದೆ, 2020 ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಆದರೆ, ಇದು ಈಗಾಗಲೇ ಬಾಕಿ ಇರುವ ಚುನಾವಣೆಗಳಿಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು. UNI