ಬೆಂಗಳೂರು:
ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ,ಆರೋಗ್ಯ ಇಲಾ ಖೆ,ಬಿಬಿಎಂಪಿ,ಗ್ರಾಮೀಣಾಭಿವೃದ್ದಿ ಇಲಾಖೆ,ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಸುಧೀರ್ಘವಾಗಿ ಚೆರ್ಚೆ ನಡೆಸಲಾಗಿದೆ. ಚಳಿಗಾಲದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮಿತಿ ವರ ದಿ ನೀಡಿದೆಅಲ್ಲದೆ ನವೆಂಬರ್ ಅಂತ್ಯ ಹಾಗೂ ಡಿಸೆಂಬರ್ ತಿಂಗಳಲ್ಲಿ ಕೋವಿಡ್ 19 ಎರಡನೆ ಅಲೆ ಕಂಡುಬರು ವು ಸಾಧ್ಯತೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿ ಸದೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಿಕೊಂ ಡು ಹೋಗಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಪ್ರಸಕ್ತ ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಇಂದು ಸಭೆ ನಡೆಸಲಾಯಿತು. ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಡಿಸೆಂಬರ್ ಅಂತ್ಯದವರೆಗೆ ಪರಿಸ್ಥಿತಿ ಅವಲೋಕಿಸಿ, ನಂತರ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಆರೋಗ್ಯ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. pic.twitter.com/aCRLJBxB7N
— B.S. Yediyurappa (@BSYBJP) November 23, 2020
ಡಿಸೆಂಬರ್ ಮೂರನೆ ವಾರ ಮತ್ತೊಮ್ಮೆ ಸಭೆ ಸೇರಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆಗಳ ಅಭಿಪ್ರಾಯಗಳನ್ನು ಪಡೆದು ಶಾಲೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.