Home ಕ್ರೀಡೆ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

53
0
Advertisement
bengaluru

ಬೆಂಗಳೂರು:

ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ,ಆರೋಗ್ಯ ಇಲಾ ಖೆ,ಬಿಬಿಎಂಪಿ,ಗ್ರಾಮೀಣಾಭಿವೃದ್ದಿ ಇಲಾಖೆ,ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಸುಧೀರ್ಘವಾಗಿ ಚೆರ್ಚೆ ನಡೆಸಲಾಗಿದೆ. ಚಳಿಗಾಲದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮಿತಿ ವರ ದಿ ನೀಡಿದೆಅಲ್ಲದೆ ನವೆಂಬರ್ ಅಂತ್ಯ ಹಾಗೂ ಡಿಸೆಂಬರ್ ತಿಂಗಳಲ್ಲಿ ಕೋವಿಡ್ 19 ಎರಡನೆ ಅಲೆ ಕಂಡುಬರು ವು ಸಾಧ್ಯತೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿ ಸದೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಿಕೊಂ ಡು ಹೋಗಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಡಿಸೆಂಬರ್ ಮೂರನೆ ವಾರ ಮತ್ತೊಮ್ಮೆ ಸಭೆ ಸೇರಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆಗಳ ಅಭಿಪ್ರಾಯಗಳನ್ನು ಪಡೆದು ಶಾಲೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

bengaluru bengaluru

bengaluru

LEAVE A REPLY

Please enter your comment!
Please enter your name here