ಬೆಂಗಳೂರು:
2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳ ಫಲಿತಾಂಶಗಳನ್ನು ಜುಲೈ 2ನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಫಲಿತಾಂಶಗಳನ್ನು ಯಾವ ಆಧಾರದಲ್ಲಿ ಘೋಷಣೆ ಮಾಡಬೇಕೆಂಬ ಕುರಿತು 12 ಮಂದಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಸಲಹೆಯನ್ನು ಪರಿಶೀಲಿಸಿ ಫಲಿತಾಂಶ ಘೋಷಣೆ ಮಾಡಲಾಗುವುದು.
ಯಾವುದೇ ವಿದ್ಯಾರ್ಥಿ ಪರೀಕ್ಷೆಯ ಫಲಿತಾಂಶ ಕುರಿತು ಸಂತೃಪ್ತಿ ಇಲ್ಲದೇ ಹೋದಲ್ಲಿ ಮುಂದೆ ಭೌತಿಕವಾಗಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಸಚಿವರು ಹೇಳಿದರು.