ಬೆಂಗಳೂರು:
ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ.
— S.Suresh Kumar, Minister – Govt of Karnataka (@nimmasuresh) January 6, 2021
ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ
ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.