Home ಶಿಕ್ಷಣ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭ...

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭ -ಸುರೇಶ್ ಕುಮಾರ್

68
0

ಬೆಂಗಳೂರು:

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್  ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ

ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here