ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಎ.10) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದರು.
ಇನ್ನೂ, 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್‌ಸೈಟ್ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.