Security Gurad found hanging in the premises of Congress MLA Dr. Ajay Singh's house
ಕಲಬುರಗಿ:
ಇಲ್ಲಿನ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತರನ್ನು ಅಜಯ್ ಸಿಂಗ್ ಅವರ ಮನೆಯ ವಾಚ್‌ಮೆನ್ ಆಗಿದ್ದ 32 ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದೆ.
ತಾಲ್ಲೂಕಿನ ಪಟ್ಟಣ ಗ್ರಾಮದ ನಿವಾಸಿಯಾದ ದೇವೇಂದ್ರ ಅವರು ಕಳೆದ ನಾಲ್ಕೈ ದು ವರ್ಷಗಳಿಂದ ಡಾ. ಅಜಯ್ ಸಿಂಗ್ ಅವರ ಮನೆಯಲ್ಲಿ ವಾಚ್‌ಮೆನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.
ಬುಧವಾರ ತಡ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದ್ದು, ಗುರುವಾರ ಬೆಳಿಗ್ಗೆ ಅಜಯ್ ಸಿಂಗ್ ಅವರ ಮನೆಯ ಅಡುಗೆ ತಯಾರಕ ಮರದಲ್ಲಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
