Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಉತ್ತಮ ಚಿತ್ರಗಳ ಆಯ್ಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
  • ಬೆಂಗಳೂರು ನಗರ

ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಉತ್ತಮ ಚಿತ್ರಗಳ ಆಯ್ಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

The Bengaluru Live March 23, 2023 9:30 PM 1 minute read
Selection of Best Films at International Film Festival: Karnataka Chief Minister Basavaraj Bommai

ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಉತ್ತಮ ಚಿತ್ರಗಳ ಆಯ್ಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

14ನೇ ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ‌ ಭಾಷಣ

ಬೆಂಗಳೂರು:

ಈ ಬಾರಿಯ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಬಾರಿ ಉತ್ತಮ ಚಿತ್ರಗಳ ಆಯ್ಕೆಯಾಗಿದೆ. ಈ ಸಿನೆಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ‌. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ‌. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ.

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಇವರ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ “ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ”ವನ್ನು ಉದ್ಘಾಟಿಸಿ ಮಾತನಾಡಿದರು . pic.twitter.com/kHQQwNKBD7

— CM of Karnataka (@CMofKarnataka) March 23, 2023

ಸಿನೆಮಾಗೆ ಬಹಳ ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ ಎಲ್ಲವೂ ವೇಗವಾಗಿ ಬೆಳೆಯುತ್ತಿರುವುದರಿಂದ ಸಿನೆಮಾದಲ್ಲಿಯೂ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಈಗ ತಂತ್ರಜ್ಞಾನದ ಮೂಲಕ ಹೋದರೆ ಯಶಸ್ಸು ಸಿಗುತ್ತದೆ ಎಂದರು.

ಕಾಂತಾರ ಬಗ್ಗೆ ಯಾರು ನಿರೀಕ್ಷೆ ಮಾಡಿರಲಿಲ್ಲ. ಕಾಂತಾರ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು. ತ್ರಿಬಲ್ ಆರ್ ಸಿನೆಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು‌. ಇದರಿಂದ ಆಸ್ಕರ್ ನಮಗೆ ದೂರ ಇಲ್ಲ. ಪ್ರತಿವರ್ಷ ಪಡೆಯಬಹುದು ಅಂತ ತೋರಿಸಿ ಕೊಟ್ಟಿದೆ.‌ ಈ ವರ್ಷ ಫೆಸ್ಟಿವಲ್ ನಲ್ಲಿ ಉತ್ತಮ ಸಿನೆಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನೆಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು.

ಸಿನೆಮಾ ಇಲ್ಲದೆ ನಮ್ಮ ಬದುಕಿಲ್ಲ. ಹೀಗಾಗಿ ಸಿನೆಮಾಗಾಗಿ ನಾನು ಏನೆಲ್ಲ ಬೇಕು, ಅದನ್ನು ಮಾಡಿದ್ದೇನೆ. ಸಿನೆಮಾ ಸಬ್ಸಿಡಿ ಹೆಚ್ಚಿಗೆ ಮಾಡಿದ್ದೇನೆ. ಸಬ್ಸಿಡಿ ಪಡೆಯುವ ಚಿತ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇನೆ. ಫಿಲ್ಮ್‌ ಸಿಟಿ ಕೂಡ ಆಗಲಿದೆ. ಅಲ್ಲಿ ಹಾಲಿವುಡ್ ಚಿತ್ರಗಳೂ ಶೂಟಿಂಗ್ ಆಗಬೇಕು ಎಂದರು.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ, ಪೂರ್ವ ದ್ವಾರದ ಮೆಟ್ಟಿಲು, ವಿಧಾನ ಸೌಧ.
https://t.co/ML0mfPrcUo

— CM of Karnataka (@CMofKarnataka) March 23, 2023

ಪುನೀತ್ ಸಮಾಧಿ ಅಭಿವೃದ್ಧಿ; ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರು

ನಾವು ಈಗಾಗಲೇ ಪವರ್ ಸ್ಟಾರ್ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ.ಪುನಿತ್ ರಾಜಕುಮಾರ್ ಅವರ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ದವಾಗುತ್ತಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ. ಮಾರ್ಚ್ 27 ರಂದು ಸ್ಮಾರಕ ಹಾಗೂ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಈ ಸಂದರ್ಭಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದ ರಾಜೀವ್ ಚಂದ್ರಶೇಖರ್, ಸಚಿವ ಆರ್. ಅಶೋಕ್ ಹಾಗೂ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಬ್ರ್ಯಾಂಡ್ ಬೆಂಗಳೂರು ಹೆಸರು ಕೆಡಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Next: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ

Related Stories

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 11:05 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 10:11 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

The Bengaluru Live November 13, 2026 10:11 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20
  • ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
©Copyright 2025 The Bengaluru Live All rights reserved. | MoreNews by AF themes.