ಬೆಂಗಳೂರು:
ಹಾನಗಲ್ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ ಮಂಗಳವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ರಾಜ್ಯದ ಗಣ್ಯರು ಕಂಬನಿ ಮಿಡಿದಿದ್ದಾರೆ.
ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 85 ವರ್ಷದ ಉದಾಸಿ, ಮೇ 25ರಂದು ನಗರದ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು.
ಹಿರಿಯ ರಾಜಕಾರಣಿಗಳು, ಮಾಜಿ ಸಚಿವರು, ಶಾಸಕ ಶ್ರೀ ಸಿ.ಎಂ.ಉದಾಸಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳು.@CMofKarnataka pic.twitter.com/Qm3HibugQQ
— DIPR Karnataka (@KarnatakaVarthe) June 8, 2021
1983ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಉದಾಸಿ, 1985ರಲ್ಲಿ ಬಿಜೆಪಿ, 1994ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು. ನಂತರ ಮತ್ತೊಮ್ಮೆ ಬಿಜೆಪಿ ಸೇರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಿಕಟವರ್ತಿಯಾಗಿದ್ದರು. 2004, 2008, 2018ರಲ್ಲಿ ಬಿಜೆಪಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು.
ಇಂದು ನಿಧನರಾದ ಹಿರಿಯ ಶಾಸಕ ಶ್ರೀ ಸಿ.ಎಂ.ಉದಾಸಿ ಅವರ ಗೌರವಾರ್ಥ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪರವರು ಗೃಹ ಕಚೇರಿ ಕೃಷ್ಣಾದಲ್ಲಿ ಎರಡು ನಿಮಿಷಗಳ ಮೌನ ಆಚರಿಸಿ ನಮನ ಸಲ್ಲಿಸಿದರು.@CMofKarnataka pic.twitter.com/5glOUnhkbh
— DIPR Karnataka (@KarnatakaVarthe) June 8, 2021
ಮುಖ್ಯಮಂತ್ರಿಗಳ ಸಂತಾಪ
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರು, ಬಂಧುಗಳು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕೋರುತ್ತಾ, ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಓಂ ಶಾಂತಿ (2/2)
— B.S. Yediyurappa (@BSYBJP) June 8, 2021