Home ಸಿನಿಮಾ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ

13
0

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ ಹೊಂದಿದ್ದಾರೆ.

ಹೃದಯಾಘಾತ ಆದ ಬಳಿಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್​ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ನಿರ್ಮಾಪಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್​ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಸ್ಟಾರ್​ ಕಲಾವಿದರ ಜೊತೆ ಅವರು ಸಿನಿಮಾ ಮಾಡಿದ್ದರು ಎನ್ನಲಾಗಿದೆ.

ಕಾಶಿನಾಥ್​, ಶಿವರಾಜ್​ಕುಮಾರ್​, ವಿಷ್ಣುವರ್ಧನ್​, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್​ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಅವರು ಹೆಸರು ಗಳಿಸಿದ್ದರು.

LEAVE A REPLY

Please enter your comment!
Please enter your name here