Serial accident in Tumkur: 2 killed, 7 injured
ತುಮಕೂರು:
ಟಾಟಾ ಏಸ್, ಕ್ಯಾಂಟರ್ ಹಾಗೂ ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಪರಿಣಾಮಮ ಇಬ್ಬರು ಸಾವನ್ನಪ್ಪಿ, 7 ಮಂದಿಗೆ ಗಾಯವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಶನಿವಾರ ನಡೆದಿದೆ.
ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಟಾಟಾ ಏಸ್‌ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ.
ಮೃತರನ್ನು ಕಲಬುರಗಿ ಜಿಲ್ಲೆಯ ಅರಳಗುಡಿ ಗ್ರಾಮದ ಭೀಮಾಬಾಯಿ (70) ಹಾಗೂ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಮೃತರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿವಾಸವಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನ ದಟ್ಟಣೆ ಇದ್ದು ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಘಟನೆ ಕುರಿತು ಮಾಹಿತಿ ತಿಳಿದುಬಂದ ಕೂಡಲೇ ಕಲ್ಲಂಬೆಳ್ಳ ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು.
