Home ರಾಜಕೀಯ ಪ್ರಜ್ವಲ್‌ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಪತ್ರ

ಪ್ರಜ್ವಲ್‌ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಪತ್ರ

43
0
Prajwal Revanna

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ವಿಶೇಷ ತನಿಖಾ ತಂಡವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ವದಿಯಾಗಿದೆ.

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹರಿದಾಡುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಅವರನ್ನು ಪತ್ತೆ ಮಾಡಲು ಎಸ್‌ಐಟಿ ತನಿಖೆ ಮುಂದುವರಿಸಿದ್ದು, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್‌ಔಟ್‌, ಬ್ಲೂ ಕಾರ್ನರ್‌  ನೋಟಿಸ್‌ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಸಹ ಜಾರಿ ಆಗಿದೆ. ಪ್ರಜ್ವಲ್ ಎಲ್ಲಿದ್ದಾರೆ ಎಂಬ ಸುಳಿವು ಇದುವರೆಗೂ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಹೋಗಿದ್ದು, ಈ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here