Home ಅಪರಾಧ ರಾಸಲೀಲೆ ಪ್ರಕರಣ; ನಾಳೆ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಹಾಜರಾಗುವ ಸಾಧ್ಯತೆ

ರಾಸಲೀಲೆ ಪ್ರಕರಣ; ನಾಳೆ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಹಾಜರಾಗುವ ಸಾಧ್ಯತೆ

131
0
ಚಿತ್ರ ಕ್ರೆಡಿಟ್: https://tv9kannada.com/

ಬೆಂಗಳೂರು:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ಇದೇ ಮೊದಲ ಬಾರಿಗೆ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವಯಂ ಪ್ರೇರಿತ ಹೇಳಿಕೆ ನೀಡುವ ಸಾಧ್ಯತೆಯಿದೆ.

ಇದನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿರುವ ಯುವತಿ ಪರ ವಕೀಲ ಜಗದೀಶ್, ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ನಿಯಮ 164ರ ಅಡಿ ಹೇಳಿಕೆ ನೀಡಲಿದ್ದಾರೆ.ಇದು ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಲಿದೆ ಎಂದಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡುವಂತೆ ಯುವತಿಗೆ ಎರಡನೇ ನೋಟಿಸ್‌ ಜಾರಿಯಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ದೂರುದಾರರು ಸಂತ್ರಸ್ಥೆಯ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಪ್ರಕರಣದ ಗೌಪ್ಯ ವಿಚಾರಣೆ ನಡೆಯುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here