Home ರಾಜಕೀಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್ ಜಾರಿ

ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್ ಜಾರಿ

31
0

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಜಾರಿ ಮಾಡಿದೆ.

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್  ಹರಿದಾಡುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಅವರನ್ನು ಬಂಧಿಸಲು ವಾರಂಟ್ ಜಾರಿಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ , ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here