Home High Court/ಹೈಕೋರ್ಟ್ ಓಲಾ ಚಾಲಕನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ

ಓಲಾ ಚಾಲಕನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ

8
0
Karnataka High Court

ಬೆಂಗಳೂರು: ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ ₹5 ಲಕ್ಷ ನೀಡುವಂತೆ ಓಲಾ ಕ್ಯಾಬ್‌ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್‌ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ನೀಡಿರುವ ದೂರಿನ ಕುರಿತು ತನಿಖೆ ನಡೆಸಲು ಕಂಪನಿಯ ಆಂತರಿಕ ದೂರು ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ.ಜಿ.ಎಸ್‌.ಕಮಲ್‌ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ. ತೀರ್ಪಿನ ಪ್ರತಿ ಇನ್ನೂ ಲಭ್ಯವಾಗಬೇಕಿದೆ.

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ”ಮಹಿಳೆಯರಿಗೆ ಲೈಂಗಿಕ ಕಿರುಕುಳ ನಿಷೇಧ, ತಡೆ ಮತ್ತು ಪರಿಹಾರ ಕಾಯಿದೆಯ-2013ರ ವಿವಿಧ ಕಲಂಗಳ ಅನ್ವಯ ದೂರಿನ ಕುರಿತು ತನಿಖೆ ನಡೆಸುವಂತೆ ಕಂಪನಿಯ ಆಂತರಿಕ ದೂರುಗಳ ಸಮಿತಿಗೆ ನಿರ್ದೇಶನ ನೀಡಧಿಲಾಧಿಗಿಧಿದೆ. 90 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು” ಎಂದೂ ನ್ಯಾಯಾಲಯ ಸೂಚನೆ ನೀಡಿದೆ.

ಅಲ್ಲದೆ, ಪೋಶ್‌ ಕಾಯಿದೆಯ ಸೆಕ್ಷನ್‌ 16 ರ ಅನುಸಾರ ಈ ಪ್ರಕರಣದಲ್ಲಿಭಾಗಿಯಾಗಿರುವ ವ್ಯಕ್ತಿಗಳ ಗುರುತನ್ನು ಬಹಿರಂಗಪಡಿಸದಂತೆ ನೋಡಿಕೊಳ್ಳಲು ಮಧ್ಯಸ್ಥಗಾರರಿಗೆ ನ್ಯಾಯಾಲಯವು ಎಚ್ಚರಿಕೆ ನೀಡಿದೆ. ಜತೆಗೆ, ಅರ್ಜಿದಾರೆಗೆ ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50,000 ರೂ.ಗಳನ್ನು ಪಾವತಿಸುವಂತೆಯೂ ನ್ಯಾಯಾಲಯ ಎಎನ್‌ಐ ಟೆಕ್ನಾಲಜೀಸ್‌ ಕಂಪನಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here