Home ಬೆಂಗಳೂರು ನಗರ Shimoga | ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ

Shimoga | ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ

70
0
Shimoga | BJP fact-finding team to visit violence-hit area
Shimoga | BJP fact-finding team to visit violence-hit area

ಬೆಂಗಳೂರು:

ಶಿವಮೊಗ್ಗ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.

ಶಿವಮೊಗ್ಗದ ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ವೇಳೆ ಉದ್ವಿಗ್ನತೆ ಮತ್ತು ಕಲ್ಲು ತೂರಾಟದ ಘಟನೆಗಳ ನಂತರ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ಈಗ ಶಾಂತಿಯುತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಿವಮೊಗ್ಗದ ರಾಗಿ ಗುಡ್ಡ ಪ್ರದೇಶದಲ್ಲಿ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಪಕ್ಷದ ನಾಯಕರನ್ನು ಒಳಗೊಂಡ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಇದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದೆ ಎಂದು ಕರ್ನಾಟಕ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಟೀಲ್ ನೇತೃತ್ವದ ಸತ್ಯಶೋಧನಾ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಆರಗ ಜನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂ.ಎಲ್.ಸಿ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ಎಂಎಲ್ಸಿಗಳಾದ ಎಸ್.ರುದ್ರೇಗೌಡ, ಡಿ ಎಸ್ ಅರುಣ್ ಮತ್ತು ಭಾರತಿ ಶೆಟ್ಟಿ ತಂಡದಲ್ಲಿದ್ದಾರೆ.

ಘಟನೆಯ ನಂತರ ಕರ್ನಾಟಕ ಬಿಜೆಪಿ ನಾಯಕರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸಿಟಿ ರವಿ ಮಂಗಳವಾರ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here