ಮೈಸೂರು:
ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಳೆದ ಭಾನುವಾರ ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಸಿದ್ದರಾಮಯ್ಯನವರೇ ಕಾರಣ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು, ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬಂದಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯ ಎಲ್ಲಾ ನೋಡಿ ಕಣ್ಮುಂಚಿ ಕುಳಿತಿದ್ದಾರೆ ಎಂದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. pic.twitter.com/mURI8ZoJou
— Pratap Simha (@mepratap) October 4, 2023
ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ರಾಜ್ಯದಲ್ಲಿ ಅನೇಕ ಹಿಂದೂ ಅಧಿಕಾರಿಗಳನ್ನು ಗುರಿಯಾಗಿಸಿ ಕಿರುಕುಳ ನೀಡಲಾಗಿತ್ತು. ಇದರಿಂದ ಕೆಲವು ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು, ಕೆಲವರು ನಿಗೂಢವಾಗಿ ಮೃತಪಟ್ಟರು. ಈ ಬಾರಿ ಅವರು ಬದಲಾಗುತ್ತಾರೆ ಎಂದು ಭಾವಿಸಿದ್ದರೆ ಅದು ತಪ್ಪಾಗಿದೆ ಎಂದರು.