Shimoga: SSLC student commits suicide | ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ, ಮಾ.25: ಇಂದು ಎಸೆಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆನಂದಪುರದ ಸರಕಾರಿ ಪಬ್ಲಿಕ್ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ ಪರಶುರಾಮ್(17) ಮೃತಪಟ್ಟ ಬಾಲಕ.
ಇಂದು ಬೆಳಗ್ಗೆ ಮನೆಯ ಹಿಂಬದಿಯಲ್ಲಿ ಕಂಬವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪರಶುರಾಮ್ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಆನಂದಪುರದ ಸಬ್ ಇನ್ ಸ್ಪೆಕ್ಟರ್ ಯುವರಾಜ್ ಕಂಬಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.