Home ಶಿವಮೊಗ್ಗ ಶಿವಮೊಗ್ಗ ದುರಂತ; ಪ್ರಧಾನಿ ಮೋದಿ ಸಂತಾಪ

ಶಿವಮೊಗ್ಗ ದುರಂತ; ಪ್ರಧಾನಿ ಮೋದಿ ಸಂತಾಪ

47
0

ಬೆಂಗಳೂರು:

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ 8ಕ್ಕೂ ಅಧಿಕ ಕಾರ್ಮಿಕರು ಮೃತಪಟ್ಟಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಸಂಭವಿಸಿರುವ ಸ್ಫೋಟ ಘಟನಯಲ್ಲಿ ಹಲವಾರು ಜೀವ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿ ಪರಿಹಾರಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here