Home Uncategorized Shivakumar: ಬಿಜೆಪಿ-ಜೆಡಿಎಸ್ ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ -DCM ಡಿಕೆಶಿ

Shivakumar: ಬಿಜೆಪಿ-ಜೆಡಿಎಸ್ ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ -DCM ಡಿಕೆಶಿ

33
0

ಬೆಂಗಳೂರು;- ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು ಎಂದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಯತ್ನಿಸುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿ, “ನನಗೆ ಎಲ್ಲಾ ಗೊತ್ತಿದೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಏನು ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ. “ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ತಿಳಿಸಿದರು.

The post Shivakumar: ಬಿಜೆಪಿ-ಜೆಡಿಎಸ್ ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ -DCM ಡಿಕೆಶಿ appeared first on Ain Live News.

LEAVE A REPLY

Please enter your comment!
Please enter your name here