Home Uncategorized Shivakumar; ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಕಳಂಕ ಕಿತ್ತೆಸೆಯುತ್ತೇವೆ – DCM...

Shivakumar; ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಕಳಂಕ ಕಿತ್ತೆಸೆಯುತ್ತೇವೆ – DCM ಡಿಕೆಶಿ

29
0

ಬೆಂಗಳೂರು;- ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಕಳಂಕ ಕಿತ್ತೆಸೆಯುತ್ತೇವೆ ಎಂದು DCM ಡಿಕೆಶಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ನಾವು ತೊಡೆದು ಹಾಕಲಿದ್ದೇವೆ.

ಬೆಂಗಳೂರಿನ ಪ್ರತಿ ರಸ್ತೆಯಲ್ಲಿ ಕ್ಯೂಆರ್ ಕೋಡ್ ಹಾಕಿ ಅಲ್ಲಿನ ಕಾಮಗಾರಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಲಾಗುವುದು. ಜನರಿಗೆ ಆ ರಸ್ತೆಯ ಕಾಮಗಾರಿ ಕುರಿತು ಜನರಿಗೆ ಮಾಹಿತಿ ನೀಡಿ ಪಾರದರ್ಶಕತೆ ಒದಗಿಸಲಾಗುವುದು ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣೆಗೆ 225 ವಾರ್ಡ ಮಾಡಲಾಗಿದೆ. ವಾರ್ಡ್ ಸಮಿತಿ ಇಲ್ಲದ ಕಾರಣ ಜನರು ಕೆಲವು ಸಲಹೆ ನೀಡಿದ್ದಾರೆ. ಉದ್ಯಾನ, ಆಟದ ಮೈದಾನಗಳ ಮೇಲುಸ್ತುವಾರಿಯನ್ನು ಸ್ಥಳೀಯರಿಗೆ ನೀಡಿ ಎಂದು ಕೋರಿದ್ದಾರೆ. ಈ ಕುರಿತು ನಾನು ಎಲ್ಲ ಶಾಸಕರ ಜೊತೆ ಚರ್ಚಿಸುತ್ತೇನೆ. ಇದರಲ್ಲಿ ಯಾವುದೇ ಪಕ್ಷದವರು ಸದಸ್ಯರಿಲ್ಲದ ನಾಗರಿಕ ಸಮೂಹಕ್ಕೆ ಜವಾಬ್ದಾರಿ ವಹಿಸಲು ಚಿಂತನೆ ನಡೆಸಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗಾಗಿ ಹೆಚ್ಚು ಉತ್ಸುಕತೆಯಿಂದ ಈ ಇಲಾಖೆ ವಹಿಸಿಕೊಂಡಿದ್ದೇನೆ.

ನಾನು ಹಾಗೂ ದಿ.ಅನಂತಕುಮಾರ್ ಅವರು ಚರ್ಚೆ ಮಾಡಿ, ಬೇರೆ ಬೇರೆ ಕಡೆ ಹೋಗಿ ಅಧ್ಯಯನ ಮಾಡಿ ನಂತರ ದೆಹಲಿ ಮಾದರಿಯಂತೆ ಮೆಟ್ರೋ ರೈಲು ಜಾರಿಗೆ ತಂದೆವು. ಇಂದು ಕೂಡ ಬೈಯ್ಯಪನಹಳ್ಳಿಯಿಂದ ಕೆ.ಆರ್ ಪುರಂ, ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ಮೆಟ್ರೋ ಮಾರ್ಗ ಆರಂಭವಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳನ್ನು ಆಹ್ವಾನಿಸಲು ಕಾಲಾವಕಾಶ ಕೇಳಿದೆವು. ಅವರು ಕಾಲಾವಕಾಶ ಕೇಳಿದ ಕಾರಣ ಇಂದು ಈ ಮಾರ್ಗಗಳ ಉದ್ಘಾಟನೆ ಮಾಡಿದ್ದಾರೆ. ನೀವು ಈ ಮಾರ್ಗಗಳಲ್ಲಿ ಪ್ರಯಾಣ ಮಾಡಬಹುದು ಎಂದು ಹೇಳಿದರು.

The post Shivakumar; ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಕಳಂಕ ಕಿತ್ತೆಸೆಯುತ್ತೇವೆ – DCM ಡಿಕೆಶಿ appeared first on Ain Live News.

LEAVE A REPLY

Please enter your comment!
Please enter your name here