ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಬೆಂಗಳೂರಿನ ತಮ್ಮ ಕೃಷ್ಣ ಗೃಹ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಯೋಜನೆಯಿಂದ ತಮ್ಮ ಬದುಕಿನಲ್ಲಿ ಆಗಿರುವ ಬದಲಾವಣೆಗಳು ಹಾಗೂ ತಮಗೆ ದೊರೆತ ಆರ್ಥಿಕ ಸ್ವಾತಂತ್ರ್ಯದ ಕುರಿತು ಮಹಿಳೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಫಲಾನುಭವಿಗಳು ತಾವೇ ತಯಾರಿಸಿದ ಪುಟ್ಟ ತೊಟ್ಟಿಲು ಮತ್ತು ದೀಪ ಸೇರಿದಂತೆ ಕರಕುಶಲ ವಸ್ತುಗಳನ್ನು ಶಿವಕುಮಾರ್ ಅವರಿಗೆ ಉಡುಗೊರೆಯಾಗಿ ನೀಡಿದರು. ಅವರ ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಮುಖ್ಯಮಂತ್ರಿ ಮೆಚ್ಚಿದರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ
— CM of Karnataka (@CMofKarnataka) November 6, 2026
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ವೇಳೆ ಮಹಿಳೆಯರು ಈ ಯೋಜನೆಯಿಂದ ತಮ್ಮ ಬದುಕಿನಲ್ಲಿ ಮೂಡಿರುವ ಬದಲಾವಣೆಗಳು, ತಮಗೆ ದೊರೆತಿರುವ ಆರ್ಥಿಕ… pic.twitter.com/gRfWAQzmml
ದೀಪಾವಳಿ ಬಾಗಿನ ಮತ್ತು ಸಹಭೋಜನ
ದೀಪಾವಳಿ ಸಂದರ್ಭದಲ್ಲಿ ಗೌರವ ಮತ್ತು ಸಮೃದ್ಧಿಯ ಸಂಕೇತವಾಗಿ ಶಿವಕುಮಾರ್ ಫಲಾನುಭವಿಗಳಿಗೆ ಸಾಂಪ್ರದಾಯಿಕ ಬಾಗಿನ ನೀಡಿದರು. ಬಳಿಕ ಅವರೊಂದಿಗೆ ಕುಳಿತು ಊಟ ಮಾಡಿದರು.
ಕುಟುಂಬದ ಆರ್ಥಿಕ ನಿರ್ವಹಣೆಯ ಜೊತೆಗೆ ಮಹಿಳೆಯರು ಸ್ವಂತ ದುಡಿಮೆ ಮತ್ತು ಉದ್ಯಮಶೀಲತೆಯ ಮೂಲಕ ಸ್ವಾವಲಂಬನೆಯತ್ತ ಸಾಗುತ್ತಿರುವುದನ್ನೂ ಸಂವಾದದಲ್ಲಿ ಪ್ರಸ್ತಾಪಿಸಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಸಂವಾದದಲ್ಲಿ ಭಾಗವಹಿಸಿದವರು
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಮತ್ತು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಭಾಗವಹಿಸಿದ್ದರು. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಮತ್ತು ಇಲಾಖೆಯ ನಿರ್ದೇಶಕ ಡಾ. ಮಹೇಶ್ ಬಾಬು ಅವರೂ ಉಪಸ್ಥಿತರಿದ್ದರು.
