ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದರು.
ಕಬ್ಬು ಬೆಳೆಗಾರರ ಹಿತಾಸಕ್ತಿ, ಬೆಂಬಲ ಬೆಲೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎನ್. ಚಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಮತ್ತು ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಚಿವರು ಹಾಗೂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಮತ್ತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಕೂಡ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆಯಲ್ಲಿ ಉಪಸ್ಥಿತರಿದ್ದರು.
ಮುಂದಿನ ಕ್ರಮ ನಿರ್ಧರಿಸುವ ಮೊದಲು ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರ ಅಭಿಪ್ರಾಯಗಳನ್ನು ಆಲಿಸುವುದಾಗಿ ಶಿವಕುಮಾರ್ ಭಾನುವಾರ ಕಿತ್ತೂರಿನಲ್ಲಿ ಹೇಳಿದ್ದರು. ಅದರ ಬೆನ್ನಲ್ಲೇ ಸೋಮವಾರ ಈ ಸಭೆ ನಡೆದಿದೆ.
