ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಕ್ಷೇತ್ರದ ಮತದಾರರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ನಾನು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರುವ ಕುರಿತು, ಕ್ಷೇತ್ರದ ಮತದಾರರೇ ತೀರ್ಮಾನ ಮಾಡುತ್ತಾರೆ ಎಂದು ಶಿವಲಿಂಗೇಗೌಡ ತಿಳಿಸಿದ್ದಾರೆ.