Home ಶಿವಮೊಗ್ಗ Shivamogga: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಸಿಎಂ ಸಿದ್ದರಾಮಯ್ಯ ಖಂಡನೆ

Shivamogga: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಸಿಎಂ ಸಿದ್ದರಾಮಯ್ಯ ಖಂಡನೆ

12
0
Shivamogga: Mahatma Gandhi statue vandalized in Holehonur! CM Siddaramaiah condemned
Shivamogga: Mahatma Gandhi statue vandalized in Holehonur! CM Siddaramaiah condemned
Advertisement
bengaluru

ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹೊಳೆಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ ಧ್ವಂಸ ನಡೆದಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.

ಗ್ರಾಮದ ಮುಖ್ಯ ಜಂಕ್ಷನ್‌ನಲ್ಲಿ 18 ವರ್ಷಗಳ ಹಿಂದೆ ರಾಷ್ಟ್ರಪಿತನ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಘಟನೆಯ ತನಿಖೆಯ ಭಾಗವಾಗಿ, ಪೊಲೀಸರು ಹೇಳಿಕೆಗಳನ್ನು ದಾಖಲಿಸಲು ಪ್ರಾರಂಭಿಸಿದ್ದಾರೆ. ಸದ್ಯಕ್ಕೆ ಯಾವುದೇ ಬಂಧನವಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

WhatsApp Image 2023 08 21 at 4.33.31 PM

ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

bengaluru bengaluru

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.

ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು…


bengaluru

LEAVE A REPLY

Please enter your comment!
Please enter your name here