ಬೆಂಗಳೂರು:
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡುವುದರ ಜೊತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಡಿಕೆ ಶಿವಕುಮಾರ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆ ಆಗಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲು ಪ್ರತಿ ಆಕಾಂಕ್ಷಿಗಳಿಂದ ಡಿಕೆ ಶಿವಕುಮಾರ್ ಹಣ ಸಂಗ್ರಹಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ಕುರಿತ ವರದಿಯನ್ನು ಬಿಜೆಪಿ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ರಾಜಕೀಯ ಎಂಬುದು ಜನಸೇವೆ, ಅದನ್ನು ಈಗ ಡಿಕೆ ಶಿವಕುಮಾರ್ ವ್ಯಾಪಾರ ಮಾಡಿಕೊಂಡಿದ್ದಾರೆ. ಹಣ ತೆಗೆದುಕೊಂಡು ಟಿಕೆಟ್ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಿದೆ.
ರಾಜಕೀಯ ಎಂಬುದು ಜನಸೇವೆ, ಅದನ್ನು @DKShivakumar ಈಗ ವ್ಯಾಪಾರ ಮಾಡಿಕೊಂಡಿದ್ದಾರೆ.
— BJP Karnataka (@BJP4Karnataka) April 21, 2023
ಹಣ ತೆಗೆದುಕೊಂಡು ಟಿಕೆಟ್ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ @ShobhaBJP ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.#ReverseGearCongress ನವರನ್ನು ಹೀಗೆಯೇ ಬಿಟ್ಟರೆ, ಮುಂದೊಂದು ದಿನ ಕರ್ನಾಟಕವನ್ನೇ ಮಾರಾಟಕ್ಕಿಟ್ಟುಬಿಟ್ಟಾರು! pic.twitter.com/8DfLhSdqZ8
ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಅಭ್ಯರ್ಥಿಗಳಿಗೆ ಟಿಕೆಕ್ ಕೊಡಲು ಅವರು ಪ್ರತಿ ಆಕಾಂಕ್ಷಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ವಿವರಿಸಿದ್ದು, ಕ್ರಮಕ್ಕೆ ಅವರು ವಿನಂತಿಸಿದರು. ಯಾವುದೇ ಚುನಾವಣಾ ಹಕ್ಕನ್ನು ಚಲಾಯಿಸಲು ಯಾರು ಹಣವನ್ನು ನೀಡುತ್ತಾರೆ ಮತ್ತು/ಅಥವಾ ತೆಗೆದುಕೊಳ್ಳುತ್ತಾರೆ ಎಂಬುದು ಲಂಚಕ್ಕೆ ಸಮನಾಗಿರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ವಿನಂತಿಸಲಾಯಿತು.
ಹಣ ನೀಡಿzವÀರಲ್ಲಿ ಅಭ್ಯರ್ಥಿಯೂ ಸೇರಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ಕೊಡುವುದು ಕೂಡ ನೀಡುವುದು ಕಾನೂನುಬಾಹಿರವಾಗಿದೆ ಮತ್ತು ಆದ್ದರಿಂದ ಕಾಂಗ್ರೆಸ್ ಪಕ್ಷ / ಡಿ.ಕೆ ಶಿವಕುಮಾರ್ ತನ್ನ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮದಿಂದ ಕೂಡಿದೆ ಮತ್ತು ತಿರಸ್ಕರಿಸಲುಬಹುದು. ಈ ಮೂಲಕ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ 1,350 ಟಿಕೆಟ್ ಆಕಾಂಕ್ಷಿಗಳಿಂದ ಪಕ್ಷ 23 ಕೋಟಿ ಕ್ರೋಡೀಕರಿಸಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಮನವಿಪತ್ರದಲ್ಲಿ ವಿವರಿಸಲಾಗಿದೆ.
ಹೀಗೆ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸುವಲ್ಲಿ ಮಧ್ಯಪ್ರವೇಶಿಸುತ್ತಿದೆ, ಬಿ ಫಾರಂಗಳನ್ನು ನೀಡುವುದು ಮತ್ತು ಹಣ ಪಡೆದು ಆಕಾಂಕ್ಷಿಗಳಿಗೆ ಟಿಕೆಟ್ ನೀಡುವುದು ಕಾನೂನುಬಾಹಿರ ಮತ್ತು ಕಳಂಕವಾಗಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಗಮನಿಸಿ ಸೂಕ್ತ ಕ್ರಮಕ್ಕೆ ಕೋರಲಾಯಿತು.
ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ಪಡೆದಿರುವ/ ನೀಡಿದ ಎಲ್ಲ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಲಾಯಿತು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು ಹಾಗೂ ನ್ಯಾಯ ಮತ್ತು ಸೂಕ್ತ ದಂಡದ ಕ್ರಮಗಳು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಕೋರಲಾಯಿತು.