Sidda Vs HDK | ಕುಮಾರಸ್ವಾಮಿಯವರಿಗೆ ಉತ್ತರಿಸುವ ಅವಶ್ಯಕತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.
