Home ಬೆಂಗಳೂರು ನಗರ Karnataka Rajyotsava | ಕನ್ನಡ ರಾಜ್ಯೋತ್ಸವ: ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Rajyotsava | ಕನ್ನಡ ರಾಜ್ಯೋತ್ಸವ: ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

115
0
Karnataka Chief Minister Siddaramaiah wishes people on eve of Rajyotsava Day
Karnataka Chief Minister Siddaramaiah wishes people on eve of Rajyotsava Day

ಬೆಂಗಳೂರು:

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣ ಮೂಲಕ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ಇಂದು ರಾಜ್ಯಾದ್ಯಂತ ಮನೆ ಮಾಡಿದೆ.

ಕನ್ನಡಿಗರ ಅಸ್ತಿತ್ವ ಮತ್ತು ಆಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಬಾವುಟ ಇಂದು ರಾಜ್ಯದೆಲ್ಲೆಡೆ ಹಾರಾಡಲಿದ್ದು, ಎಲ್ಲೆಡೆ ಕನ್ನಡ ಡಿಂಡಿಮ ಮೊಳಗಲಿದೆ.

“ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ,” ಎಂದಿದ್ದಾರೆ.

1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದರು.

LEAVE A REPLY

Please enter your comment!
Please enter your name here