Home ರಾಜಕೀಯ ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಸಿದ್ದರಾಮಯ್ಯಗೂ ಗೊತ್ತಿದೆ : ವಿಜಯೇಂದ್ರ

ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಸಿದ್ದರಾಮಯ್ಯಗೂ ಗೊತ್ತಿದೆ : ವಿಜಯೇಂದ್ರ

12
0

ಬೆಂಗಳೂರು: “ಉಪಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಗೊತ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಹೊರಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “2 ದಿನಗಳ ಕಾಲ ಸಿಎಂ ಸಂಡೂರು ಪ್ರವಾಸ ನಿಗದಿಯಾಗಿತ್ತು. ಮತ್ತೆ 3 ದಿನಗಳ ಕಾಲ ವಿಸ್ತರಿಸಿದ್ದಾರೆ. ಮುಖ್ಯಮಂತ್ರಿಗಳನ್ನು ನೋಡಬೇಕು, ಅವರ ಮಾತು ಕೇಳಬೇಕೆಂಬ ಆಸಕ್ತಿಯೂ ಜನರಲ್ಲಿ ಹೊರಟುಹೋಗಿದೆ” ಎಂದು ವಿಶ್ಲೇಷಿಸಿದರು.

“ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತ ಬಾಗಿಲು ಹಾಕಿ ಎಸಿಬಿ ರಚಿಸಿದಾಗ ಹೈಕೋರ್ಟ್ ಮಂಗಳಾರತಿ ಎತ್ತಿತ್ತು. ಇವೆಲ್ಲ ರಾಜ್ಯದ ಜನರಿಗೆ ಗೊತ್ತಿದೆ. ಇವರ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದರು.

ʼವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಸಿದ್ದರಾಮಯ್ಯನವರ ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ. ಕೇಂದ್ರದ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಎನ್ನಲು ತಯಾರಿಲ್ಲʼ ಎಂದರು.

ʼಕಾಂಗ್ರೆಸ್ ಸರಕಾರಗಳ ಅವಧಿಯಲ್ಲಿ ರಚಿಸಿದ ಆಯೋಗಗಳು, ಅವು ನೀಡಿದ ವರದಿಯ ವಿಚಾರ ನಮಗೆ ಮತ್ತು ರಾಜ್ಯದ ಜನತೆಗೆ ಗೊತ್ತಿದೆ. ಇದೇ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಹಿಂದೆ ಲೋಕಾಯುಕ್ತದ ಬಾಗಿಲನ್ನು ಮುಚ್ಚಿ ಹಾಕಿ, ಎಸಿಬಿ ರಚಿಸಿ ತಮ್ಮನ್ನು ತಾವು ರಕ್ಷಿಸುವ ಕೆಲಸ ಮಾಡಿಲ್ಲವೇ? ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರನ್ನು ರಕ್ಷಿಸುವ ಕೆಲಸ ಮಾಡಿಲ್ಲವೇʼ ಎಂದು ಪ್ರಶ್ನಿಸಿದರು.

ʼಸಿದ್ದರಾಮಯ್ಯನವರು ಹತಾಶರಾಗಿದ್ದಾರೆ. 3 ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಸೋಲಿನ ದವಡೆಯಲ್ಲಿ ಸಿದ್ದರಾಮಯ್ಯರ ಸರಕಾರ ಸಿಲುಕಿದೆ. 3 ಕ್ಷೇತ್ರಗಳಲ್ಲೂ ಸೋಲಾದರೆ ಸಿಎಂ ಬುಡಕ್ಕೆ ಬರುತ್ತದೆ ಎಂಬ ಅರಿವು, ಸತ್ಯ ಗೊತ್ತಾಗಿದೆ. ಅದಕ್ಕಾಗಿ ಕುನ್ಹಾ ವರದಿಯನ್ನು ಆತುರಾತುರವಾಗಿ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆʼ ಎಂದು ಆರೋಪಿಸಿದರು.

LEAVE A REPLY

Please enter your comment!
Please enter your name here