Siddaramaiah’s budget has put flowers in the ears of seven crore people: Kumaraswamy| ಸಿದ್ದರಾಮಯ್ಯ ಬಜೆಟ್ ಏಳು ಕೋಟಿ ಜನರ ಕಿವಿಗೆ ಹೂವು ಇಟ್ಟಿದ್ದಾರೆ:ಕುಮಾರಸ್ವಾಮಿ
ಬೆಂಗಳೂರು: ಇವತ್ತಿನ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ದಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.