ವಿಜಯನಗರ:
ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ಶನಿವಾರ ನಡೆದಿದೆ.
ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್ನಲ್ಲಿ ಬ್ಯೂಸಿ ಆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ಕೈ ಹಿಡಿದು ಎತ್ತಿದ್ದಾರೆ.
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.
— Siddaramaiah (@siddaramaiah) April 29, 2023
ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.
ಈಗ ಆರಾಮಾಗಿದ್ದೇನೆ.
ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.
ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ.
ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ ತೆರಳಿದ್ದರು.