Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದ ಹೆಚ್‌ಡಿಕೆ
  • ರಾಜಕೀಯ
  • ಬೆಂಗಳೂರು ನಗರ

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದ ಹೆಚ್‌ಡಿಕೆ

The Bengaluru Live October 16, 2021 1:00 PM 1 minute read
Siddaramaiah is "Terminator of Minority Leaders" in Karnataka: HD Kumarswamy

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದ ಹೆಚ್‌ಡಿಕೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸರಣಿ ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕನ ಮೇಲೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

  • ಮುಸ್ಲೀಂ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಸಿದ್ದರಾಮಯ್ಯ
  • ಪ್ರತಿಪಕ್ಷ ನಾಯಕನ ನಿಜ ಬಣ್ಣ ಬಯಲಾಗಿದೆ ಎಂದ ಹೆಚ್‌ಡಿಕೆ
  • ಸರಡಗಿ ಸೋಲಿಗೆ ಕಾರಣ ಹೇಳಿದ ದಳಪತಿ
  • ರೆಹಮಾನ್ ಷರೀಫ್, ರೋಷನ್ ಬೇಗ್, ಸಲೀಂ ರಾಜಕೀಯ ಭವಿಷ್ಯಕ್ಕೆ ಕೊಳ್ಳಿ
  • ತನ್ವೀರ್ ಸೇಠ್ ಮೇಲೆ ಸಿದ್ದರಾಮಯ್ಯ ಸೇಡಿನ ರಾಜಕಾರಣ

ಬೆಂಗಳೂರು:

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿಸೆಕ್ಯೂಲರ್ ಮತಗಳನ್ನು ವಿಭಜನೆ ಮಾಡಲು ಜೆಡಿಎಸ್ ಮುಸ್ಲೀಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಆರೋಪ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನುʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದು ಕರೆದಿರುವ ಹೆಚ್ಡಿಕೆ ಅವರು, ಸರಣಿ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ದೂರುವುದು ಸೇರಿದಂತೆ ಅಲ್ಪಸಂಖ್ಯಾತರ ವಿಷಯವನ್ನೇ ಮುಂದು ಮಾಡಿ ಪಕ್ಷವನ್ನು ಪದೇ ಪದೆ ಟೀಕೆ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ.

“ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ!”

“ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ.”

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ #ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ.2/12

— H D Kumaraswamy (@hd_kumaraswamy) October 16, 2021

“ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ.”

“2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಭೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು?”

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? 4/12

— H D Kumaraswamy (@hd_kumaraswamy) October 16, 2021

ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಾರೆ. ಅದಕ್ಕೆ ಹೈಕಮಾಂಡ್ ಸೊಪ್ಪು ಹಾಕುವುದಿಲ್ಲ. ರಾಜಕೀಯ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! ಇನ್ನು; 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?”

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?6/12

— H D Kumaraswamy (@hd_kumaraswamy) October 16, 2021

“ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.”

“ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.”

ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ. 8/12

— H D Kumaraswamy (@hd_kumaraswamy) October 16, 2021

“ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?”

“ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.”

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. 10/12

— H D Kumaraswamy (@hd_kumaraswamy) October 16, 2021

“ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ.”

“ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ…”

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ… 12/12#ಕಾಂಗ್ರೆಸ್_ಅಲ್ಪಸಂಖ್ಯಾತ_ನಾಯಕರ_ಟರ್ಮಿನೇಟರ್‌ #ಸಿದ್ದಹಸ್ತ #ಸಿದ್ದಸೂತ್ರಧಾರ

— H D Kumaraswamy (@hd_kumaraswamy) October 16, 2021

ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ʼನಲ್ಲಿ ಹೇಳಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ
Next: ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್ ವಾಲಿದೆ

Related Stories

ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

The Bengaluru Live November 13, 2026 1:47 PM
ತ್ಯಾಜ್ಯ ತೆರವಿನ ನಂತರ ವಿದ್ಯಾರಣ್ಯಪುರದಲ್ಲಿ ಕಾಂಪೌಂಡ್ ಗೋಡೆ ಮತ್ತು ಮರಗಳಿರುವ ರಸ್ತೆಯ ಪಕ್ಕದ ಸ್ವಚ್ಛ ಪಾದಚಾರಿ ಮಾರ್ಗ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು

The Bengaluru Live November 13, 2026 1:23 PM
ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM

Latest Post

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

November 13, 2026 1:47 PM
ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು ತ್ಯಾಜ್ಯ ತೆರವಿನ ನಂತರ ವಿದ್ಯಾರಣ್ಯಪುರದಲ್ಲಿ ಕಾಂಪೌಂಡ್ ಗೋಡೆ ಮತ್ತು ಮರಗಳಿರುವ ರಸ್ತೆಯ ಪಕ್ಕದ ಸ್ವಚ್ಛ ಪಾದಚಾರಿ ಮಾರ್ಗ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು

November 13, 2026 1:23 PM
ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ಚಾಲನೆ ನೀಡುವ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೆಟ್ಟ ಸಸಿಗೆ ನೀರು ಹಾಕುತ್ತಿರುವುದು
  • ಕರ್ನಾಟಕ

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ

November 13, 2026 1:21 PM
ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್ ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

November 13, 2026 12:20 PM
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

November 13, 2026 12:17 PM
ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

November 13, 2026 8:24 AM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

The Bengaluru Live November 13, 2026 1:47 PM
ತ್ಯಾಜ್ಯ ತೆರವಿನ ನಂತರ ವಿದ್ಯಾರಣ್ಯಪುರದಲ್ಲಿ ಕಾಂಪೌಂಡ್ ಗೋಡೆ ಮತ್ತು ಮರಗಳಿರುವ ರಸ್ತೆಯ ಪಕ್ಕದ ಸ್ವಚ್ಛ ಪಾದಚಾರಿ ಮಾರ್ಗ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು

The Bengaluru Live November 13, 2026 1:23 PM
ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ಚಾಲನೆ ನೀಡುವ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೆಟ್ಟ ಸಸಿಗೆ ನೀರು ಹಾಕುತ್ತಿರುವುದು
  • ಕರ್ನಾಟಕ

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ

The Bengaluru Live November 13, 2026 1:21 PM
ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ
  • ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು
  • ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ
  • ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್
©Copyright 2025 The Bengaluru Live All rights reserved. | MoreNews by AF themes.