ಬೆಂಗಳೂರು:
ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಿಸುವುದಾಗಿ ವಾಗ್ದಾನ ಮಾಡಿದರೆ, ಅದನ್ನು ತಡೆಯಲು ಜನರು ಬಿಜೆಪಿ ಬೆಂಬಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ಜನರಲ್ಲಿ ಮನವಿ ಮಾಡಿದರು.
ಅದೇ ರೀತಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಬಜರಂಗದಳ ಬ್ಯಾನ್ ವಿಚಾರ ಕೂಡಾ ಪ್ರಚಾರದ ವೇಳೆಯಲ್ಲಿ ಎಲ್ಲೆಲ್ಲೂ ಮಾರ್ದನಿಸಿತು. ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ ನಾಯಕರು ಪೈಪೋಟಿಗೆ ಬಿದ್ದಂತೆ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಮತದಾನ ವೇಳೆ ಬಜರಂಗಿಬಲಿ ಘೋಷಣೆ ಕೂಗಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕೂಡಾ ಜನರಿಗೆ ಕರೆ ನೀಡಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ. 4 ರಿಂದ 6ಕ್ಕೆ ಹೆಚ್ಚಿಸಲಿದೆಯೇ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಾಕಷ್ಟು ಯೋಚಿಸಿ ಮೀಸಲಾತಿ ಹೆಚ್ಚಿಸಲಾಗಿದೆ. ಒಂದು ವೇಳೆ ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಿಸಲಿದೆಯೇ ಎಂಬುದನ್ನು ಚುನಾವಣಾ ಪ್ರಚಾರ ಮುಗಿಯುವುದರೊಳಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು.
#WATCH | Reservation within reservation done with a lot of thought…Before the end of campaigning for Karnataka elections, Siddaramaiah must clarify that if Congress increases the reservation for Muslims from 4% to 6%, then whose reservation will they cut-down,says HM Amit Shah. pic.twitter.com/JLsCF1Q3RS
— ANI (@ANI) May 8, 2023