Home ರಾಜಕೀಯ ನಾಳೆಯಿಂದ ಮೂವರು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ

ನಾಳೆಯಿಂದ ಮೂವರು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ

12
0

ಮೈಸೂರು/ಬೆಂಗಳೂರು: ನಾಳೆಯಿಂದ 3 ದಿನ CM ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಲಭ್ಯವಿರಲ್ಲ ಎನ್ನಲಾಗಿದೆ. ನಾಳೆ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, 2 ದಿನ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಭಾನುವಾರ ಧಾರವಾಡ ಮತ್ತು ಬೆಳಗಾವಿಗೆ ತೆರಳಲಿದ್ದಾರೆ.

ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅ.11, 12, 13ರಂದು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಅಕ್ಟೋಬರ್ 11ರಂದು ಬೆಳಗ್ಗೆ 10.25ಕ್ಕೆ ಮೈಸೂರಿಗೆ ಆಗಮಿಸುವ ಸಿಎಂ, ಅ.12ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ಅಕ್ಟೋಬರ್, 12ರಂದು ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆಯ ಬಲರಾಮ ದ್ವಾರದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ಸಂಜೆ 4ರಿಂದ 4.30ರವರೆಗೆ ಜಂಬೂಸವಾರಿಗೆ ಚಾಲನೆ ನೀಡಲಿದ್ದು, ಚಿನ್ನದ ಅಂಬಾರಿಯಲ್ಲಿ ಆಸೀನರಾಗುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ.

ಇನ್ನು ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ಟಾರ್ಚ್ ಲೈಟ್ ಪರೇಡ್​ನಲ್ಲಿ ಭಾಗವಹಿಸಲಿದ್ದಾರೆ. ಅ.13ರಂದು ಬೆಳಗ್ಗೆ 11ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ 11.30ಕ್ಕೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ. ಭಾನುವಾರ ಅಂದರೆ ಅ.13ರಂದು ಮೈಸೂರಿನಿಂದ ಹೊರಡುವ ಸಿಎಂ ಸಿದ್ದರಾಮಯ್ಯ ಧಾರವಾಡ ಮತ್ತು ಬೆಳಗಾವಿಗೆ ಜಿಲ್ಲಾಗಳಿಗೂ ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here