Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ರಾಷ್ಟ್ರಕವಿ ಕುವೆಂಪು ಆದರ್ಶಗಳಿಗೆ ವಿರುದ್ಧವಾದ ಸಿದ್ದರಾಮಯ್ಯ ಬಜೆಟ್: ಎನ್. ರವಿಕುಮಾರ್
  • ಬೆಂಗಳೂರು ನಗರ

ರಾಷ್ಟ್ರಕವಿ ಕುವೆಂಪು ಆದರ್ಶಗಳಿಗೆ ವಿರುದ್ಧವಾದ ಸಿದ್ದರಾಮಯ್ಯ ಬಜೆಟ್: ಎನ್. ರವಿಕುಮಾರ್

Vighnesh Pawar July 7, 2023 7:00 PM
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವ್ಯಕ್ತಿತ್ವಕ್ಕೆ ವಿರುದ್ಧವಾದ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳಿಗೆ ವ್ಯತಿರಿಕ್ತವಾದ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ.

ಬಜೆಟ್ ಮಂಡನೆ ಎನ್ನುವುದು ರಾಜ್ಯದ ಅಭಿವೃದ್ಧಿ, ಮುನ್ಸೂಚನೆ ನೀಡುವ ದಾಖಲೆ. ಅದಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದೆ. ನಾವೆಲ್ಲ ಚುನಾವಣೆ ಸಮಯದಲ್ಲಿ ಹಾಗೂ ಸದನದ ಹೊರತೆ ಆರೋಪ ಪ್ರತ್ಯಾರೋಪ ಮಾಡಿದರೂ ಬಜೆಟ್ ಮಂಡನೆ ಎನ್ನುವುದು ರಾಜಕೀಯದಿಂದ ಹೊರತಾದ ಪವಿತ್ರ ಕರ್ತವ್ಯ. ಸದನದಲ್ಲಿ ಬಜೆಟ್ ಮಂಡನೆಗೆ ಅವಕಾಶ ಸಿಗುವುದು ಪುಣ್ಯದ ಫಲ. ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ 14 ಬಾರಿ ಬಜೆಟ್ ಮಂಡನೆಗೆ ಅವಕಾಶ ಸಿಕ್ಕಿರುವುದು ಈ ರಾಜ್ಯ ಹಾಗೂ ದೇಶದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಕಾರಣಕ್ಕೆ, ಒಕ್ಕೂಟ ವ್ಯವಸ್ಥೆಯ ಕಾರಣಕ್ಕೆ.

ಆದರೆ ಈ ಬಾರಿ ಸಿದ್ದರಾಮಯ್ಯ ಅವರು ತಮ್ಮ ಕರ್ತವ್ಯದಲ್ಲಿ ವಿಮುಖರಾಗಿದ್ದಾರೆ. ಬಜೆಟ್ನ ಪ್ರತಿ ಅಂಶದಲ್ಲೂ ಬಿಜೆಪಿಯನ್ನು ಟೀಕಿಸಲು ಒಂದಷ್ಟು ಅಂಶವನ್ನು ಮೀಸಲಿಟ್ಟಿದ್ದಾರೆ. ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕೇಂದ್ರ ಹಾಗೂ ರಾಜ್ಯಗಳ ನಡುವಿನ ಪವಿತ್ರ ಬಾಂಧವ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು “ಟೀಂ ಇಂಡಿಯಾ” ಪರಿಕಲ್ಪನೆಯಲ್ಲಿ ದೇಶದ ಆರ್ಥಿತೆಯನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡಲು ಹೊರಟಿದ್ದಾರೆ. ಆದರೆ ಸಿದ್ದರಾಮಯ್ಯ ಅವರು “ಬ್ರೇಕಿಂಗ್ ಇಂಡಿಯಾ” ಪರಿಕಲ್ಪನೆಯಲ್ಲಿ ಕರ್ನಾಟಕವನ್ನು ಅಭಿವೃದ್ಧಿಯಿಂದ ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ.

ರಾಜ್ಯದ ಆಡಳಿತವು ರಾಷ್ಟ್ರಪತಿಗಳ ಆಜ್ಞಾನುಸಾರ, ರಾಜ್ಯಪಾಲರ ಮೂಲಕ ನಡೆಯುತ್ತದೆ ಎನ್ನುವುದು ಸಾಂವಿಧಾನಿಕ ಸ್ವರೂಪ. ಅಂದರೆ ನಾವೆಲ್ಲರೂ ಒಂದು ದೇಶದ ಅಂಗಗಳು ಎನ್ನುವುದೇ ಒಕ್ಕೂಟ ವ್ಯವಸ್ಥೆಯ ರಚನೆ. ಆದರೆ ಬಜೆಟ್ನಂತಹ ಅಧಿಕೃತ ದಾಖಲೆಗಳಲ್ಲಿ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಮಾತುಗಳನ್ನೇ ಸಿದ್ದರಾಮಯ್ಯ ಆಡಿದ್ದಾರೆ.

“ಅಂಧಕಾರದಲ್ಲಿರುವ ಇಂದಿನ ಭಾರತದಲ್ಲಿ ಲಕ್ಷಾಂತರ ಭಾರತೀಯರ ಕನಸುಗಳಿಗೆ ರೆಕ್ಕೆ ಮೂಡಿಸಲು ಕರ್ನಾಟಕ ಸರ್ಕಾರ ಶ್ರಮಿಸಲಿದೆ” ಎಂದಿರುವ ಸಿದ್ದರಾಮಯ್ಯ ಅವರು, ನಿಸ್ತೇಜಗೊಂಡಿರುವ ಕಾಂಗ್ರೆಸ್ ಪಕ್ಷವನ್ನು ತಾವು ಮೇಲೆತ್ತಬಹುದು ಎಂದು ಭ್ರಮಿಸಿದಂತಿದೆ. ಮನಬಂದಂತೆ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ.

”ಯಾವ ಕಾಲದ ಶಾಸ್ತ್ರವೇನು ಹೇಳಿದರೇನು, ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?” ಎಂಬ ರಾಷ್ಟ್ರಕವಿ ಕುವೆಂಪು ಅವರ ಸಾಲುಗಳನ್ನು ಬಜೆಟ್ನಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ಆದರೆ ಅದೇ ರಾಷ್ಟ್ರಕವಿ ಕುವೆಂಪು ಅವರು ಹೇಳಿದ “ಜೈ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ” ಎಂಬ ಮಹಾವಾಕ್ಯಕ್ಕೆ ದ್ರೋಹ ಎಸಗಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್ ಹೊಂದಿದ್ದ ಎಲ್ಲ ಗೌರವ, ಮರ್ಯಾದೆಗಳನ್ನೂ ಗಾಳಿಗೆ ತೂರಿದ್ದಾರೆ. ಭಾರತದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನೇ ಅಣಕಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜೋಡೆತ್ತುಗಳಂತೆ, ಡಬಲ್ ಇಂಜಿನ್ ರೀತಿಯಲ್ಲಿ ನಡೆದರೆ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಹೇಳುತ್ತಿದ್ದರೆ ಸಿದ್ದರಾಮಯ್ಯ ಅವರು ಭಾರತ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವಂತೆ ನಡೆಯುತ್ತಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.

ಆರ್ಥಿಕವಾಗಿಯೂ ಸಿದ್ದರಾಮಯ್ಯ ವಿಫಲವಾಗಿದ್ದಾರೆ. ಬಿಜೆಪಿ ಸರ್ಕಾರ 77 ಸಾವಿರ ಕೋಟಿ ರೂ. ಸಾಲ ಮಾಡಿದ್ದರೆ ಈಗ 88 ಸಾವಿರ ಕೋಟಿ ರೂ.ಗೆ ಸಾಲವನ್ನು ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಯ ಯೋಜನೆಗಳನ್ನು ಘೋಷಿಸಿ ಉಳಿತಾಯ ಬಜೆಟ್ಟನ್ನು ಬಿಜೆಪಿ ಘೋಷಣೆ ಮಾಡಿತ್ತು. ಆದರೆ ಈಗ ಸಿದ್ದರಾಮಯ್ಯ ಅವರು 12,253 ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದ್ದಾರೆ. ಅಂದರೆ ಈ 12,253 ಕೋಟಿ ರೂ. ಹಣವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದು ತಿಳಿಸಿಲ್ಲ. ಅಲ್ಲಿಗೆ ಈ ಬಜೆಟ್ನಲ್ಲಿ ಘೋಷಣೆ ಮಾಡಲಾದ ಎಲ್ಲವನ್ನೂ ಅನುμÁ್ಠನ ಮಾಡುವುದಿಲ್ಲ ಎಂದು ಈಗಲೇ ತಿಳಿಸಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

About the Author

Vighnesh Pawar

Subscriber

View All Posts

Post navigation

Previous: Karnataka Budget 2023: ಸಂಪೂರ್ಣ ಜನಪರ ಬಜೆಟ್‌: ಎಂ ಬಿ ಪಾಟೀಲ
Next: South Western Railway: ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಜುಲೈ 16 ರಿಂದ ಸ್ಥಗಿತ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.