ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಮದ್ಯದ ಘೋಷಿತ (Liquor Prices) ಸ್ಲಾಬ್‍ಗಳನ್ನು(ಬೆಲೆ)ಯನ್ನು ಏರಿಕೆ ಮಾಡುವ ಮುನ್ಸೂಚನೆಯನ್ನು ತಮ್ಮ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 2024-25ನೆ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ, ಮದ್ಯದ ಘೋಷಿತ ಸ್ಲಾಬ್‍ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯದ ಮದ್ಯದ ಬೆಳವಣಿಗೆಗೆ ಅನುಗುಣವಾಗಿ ದೇಶೀಯವಾಗಿ ತಯಾರಾಗುವ ಮದ್ಯ (ಐಎಂಎಲ್) ಮತ್ತು ಬಿಯರ್ ನ ಸ್ಲಾಬ್‍ಗಳನ್ನು ಪರಿಷ್ಕರಣೆ ಮಾಡಲಾಗುವುದು. ನೆರೆ ರಾಜ್ಯಗಳಲ್ಲಿ ಕೆಲವು ಮದ್ಯ ಮಾರಾಟ ದರ ರಾಜ್ಯಕ್ಕಿಂತಲೂ ದುಬಾರಿಯಾಗಿದೆ. ಪರಿಷ್ಕರಣೆಗೊಂಡರೆ ಸಹಜವಾಗಿಯೇ ಅದು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
2024ರ ಜನವರಿ ಅಂತ್ಯದ ವರೆಗೆ ಅಬಕಾರಿ ಇಲಾಖೆಯಿಂದ 28,181 ಕೋಟಿ ರೂ.ಆದಾಯ ಸಂಗ್ರಹವಾಗಿದ್ದು, ಮುಂದಿನ ವರ್ಷ 38,225 ಕೋಟಿ ರೂ.ಗಳ ಆದಾಯ ಸಂಗ್ರಹಿಸುವ ಗುರಿ ಹಾಕಿಕೊಳ್ಳಲಾಗಿದೆ.