ಬೆಂಗಳೂರು:
ಸರಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್ ವಿದ್ಯುತ್ ಉಚಿತ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಈ ಬಗ್ಗೆ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್ , ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇಕಡವಾರು 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ಉಚಿತ ವಿದ್ಯುತ್ ನೀಡಲು ಸರಕಾರ ತೀರ್ಮಾನ ತೆಗೆದುಕೊಂಡಿದೆ.
ಇತ್ತ ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ.