Home ರಾಜಕೀಯ ಸ್ಥಳ ಮಹಜರು: ಹೊಳೆನರಸೀಪುರದ ಮನೆಗೆ ಪ್ರಜ್ವಲ್ ಕರೆತಂದ ಎಸ್ಐಟಿ

ಸ್ಥಳ ಮಹಜರು: ಹೊಳೆನರಸೀಪುರದ ಮನೆಗೆ ಪ್ರಜ್ವಲ್ ಕರೆತಂದ ಎಸ್ಐಟಿ

27
0

ಹಾಸನ/ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‍ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ. ಡಿವೈಎಸ್‍ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು.

ಎಸ್‍ಐಟಿ ಅಧಿಕಾರಿಗಳೊಂದಿಗೆ ಎಫ್‍ಎಸ್‍ಎಲ್ ಅಧಿಕಾರಿಗಳು ಸಹ ಮಾಹಿತಿ ಕಲೆಹಾಕುತ್ತಿದ್ದಾರೆ. ಚೆನ್ನಾಂಬಿಕಾ ನಿವಾಸದ ಎದುರು ಎಎಸ್‍ಪಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

LEAVE A REPLY

Please enter your comment!
Please enter your name here