Home ರಾಜಕೀಯ ಕುಮಾರಸ್ವಾಮಿ ಮೇಲೆ ಎಸ್‌ಐಟಿ ಅಸ್ತ್ರ: ರಾಜ್ಯಪಾಲರಿಗೆ ಮನವಿ

ಕುಮಾರಸ್ವಾಮಿ ಮೇಲೆ ಎಸ್‌ಐಟಿ ಅಸ್ತ್ರ: ರಾಜ್ಯಪಾಲರಿಗೆ ಮನವಿ

9
0

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಯ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಕೇಂದ್ರ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮಿಗೂ ಹಳೆ ಪ್ರಕರಣವೊಂದರಿಂದ ಸಂಕಷ್ಟ ಶುರುವಾಗಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ ಕಂಪನಿಗೆ ಕಾನೂನು ಉಲ್ಲಂಘಿಸಿ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ದೋಷಾರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ಎಸ್​ಎಸ್​ವಿಎಂ ಕಂಪನಿಗೆ ಗಣಿ ಹಾಗೂ ಖನಿಜ ಕಾಯ್ದೆ ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.. 2011ರಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಎನ್‌.ಸಂತೋಷ್‌ ಹೆಗ್ಡೆಯವರು ಸಲ್ಲಿಸಿದ್ದ ವರದಿ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿದೆ. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಎಸ್‌ಐಟಿ 2023ರ ನವೆಂಬರ್‌ 21ರಂದು ರಾಜ್ಯಪಾಲರಿಗೆ ಪತ್ರ ಬರೆದು ಅನುಮತಿ ಕೋರಲಾಗಿತ್ತು. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಷ್ಟು ಸ್ಪಷ್ಟನೆ ಕೊಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್‌ಐಟಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಈ ಸ್ಪಷ್ಟನೆ ನೀಡುತ್ತಾ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದೆ.

LEAVE A REPLY

Please enter your comment!
Please enter your name here