Home ಅಪರಾಧ ಭೀಕರ ಅಪಘಾತ: ಹಾಸನದಲ್ಲಿ ಮಗು ಸೇರಿದಂತೆ 6 ಜನ ಸಾವು

ಭೀಕರ ಅಪಘಾತ: ಹಾಸನದಲ್ಲಿ ಮಗು ಸೇರಿದಂತೆ 6 ಜನ ಸಾವು

28
0

ಹಾಸನ : ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂ ಬೆಳಗ್ಗೆ ಜರುಗಿದೆ.

ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here