ಬೆಂಗಳೂರು/ಮಂಡ್ಯ :
ಕಾಂಗ್ರೆಸ್ ಕಾರ್ಯಕರ್ತನೋರ್ವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಗಲ ಮೇಲೆ ಕೈಹಾಕಲು ಬಂದಿದ್ದಕ್ಕೆ ಡಿಕೆಶಿ ತಲೆಗೆ ಬಾರಿಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ನಡೆದಿದೆ.
ಕೆ.ಎಂ. ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಆಗಮಿಸಿದ ಡಿ.ಕೆ.ಶಿವಕುಮಾರ್, ಆಸ್ಪತ್ರೆಯ ಒಳಗಡೆಗೆ ಬರುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹೆಗಲ ಮೇಲೆ ಕೈ ಹಾಕಲು ಪ್ರಯತ್ನಿಸಿದ. ಈ ವೇಳೆ ಕಾರ್ಯಕರ್ತನ ತಲೆ ಮೇಲೆ ಹೊಡೆದು ಡಿಕೆಶಿ ಗರಂ ಆದರು.
ಇಲ್ಲಿ ಓದಿ: ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ, ಅದು ನಮ್ಮ ಪ್ರೀತಿಯ ಸಂಬಂಧ; ಡಿ.ಕೆ. ಶಿವಕುಮಾರ್ ಸ್ಪಷ್ಟನೆ