ಬೆಂಗಳೂರು:
‘ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:
‘ಆತ ನಮ್ಮ ಹುಡುಗ, ನಮ್ಮ ದೂರದ ಸಂಬಂಧಿ. ಹೆಗಲ ಮೇಲೆ ಕೈ ಹಾಕಿದಾಗ ಬೇರೆಯವರು ಏನು ತಿಳಿಯುತ್ತಾರೆ ಎಂದು ಬೈದೆ. ಜೋರಾಗಿ ಹೊಡೆದದ್ದೂ ನಿಜ. ತಪ್ಪು ಮಾಡಿದಾಗ ಬಯ್ಯುವುದು ಸಹಜ. ಅದು ನಮ್ಮ ಪ್ರೀತಿಯ ಸಂಬಂಧ. ನಾವು, ಅವರು ಎಲ್ಲ ತಪ್ಪು ಮಾಡುತ್ತೇವೆ. ನಿಮ್ಮ ಖುಷಿಗೆ ನೀವು ಅದನ್ನು ತೋರಿಸುತ್ತಿದ್ದೀರಿ. ನೀವು ಅವನನ್ನು ನಾಯಕನನ್ನಾಗಿ ಮಾಡಿ.
ಇಲ್ಲಿ ಓದಿ: ಹೆಗಲ ಮೇಲೆ ಕೈ ಹಾಕಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತನೋರ್ವಗೆ ಬಾರಿಸಿದ ಡಿಕೆ ಶಿವಕುಮಾರ್