Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • Uncategorized
  • ಕೋವಿಡ್‌ ನಂತರದ ಕಾಲದಲ್ಲಿ ಸ್ಮಾರ್ಟ್‌ ಕ್ಲಿನಿಕ್‌, ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ವಿಪುಲ ಅವಕಾಶ: ಅಶ್ವತ್ಥನಾರಾಯಣ
  • Uncategorized

ಕೋವಿಡ್‌ ನಂತರದ ಕಾಲದಲ್ಲಿ ಸ್ಮಾರ್ಟ್‌ ಕ್ಲಿನಿಕ್‌, ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ವಿಪುಲ ಅವಕಾಶ: ಅಶ್ವತ್ಥನಾರಾಯಣ

The Bengaluru Live February 14, 2021 6:30 PM 1 minute read
ಕೋವಿಡ್‌ ನಂತರದ ಕಾಲದಲ್ಲಿ ಸ್ಮಾರ್ಟ್‌ ಕ್ಲಿನಿಕ್‌, ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ವಿಪುಲ ಅವಕಾಶ: ಅಶ್ವತ್ಥನಾರಾಯಣ

ಕೋವಿಡ್‌ ನಂತರದ ಕಾಲದಲ್ಲಿ ಸ್ಮಾರ್ಟ್‌ ಕ್ಲಿನಿಕ್‌, ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ವಿಪುಲ ಅವಕಾಶ: ಅಶ್ವತ್ಥನಾರಾಯಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಶ್ರೀ ಸಾಯಿರಾಮ್‌ ಆಸ್ಪತ್ರೆಯನ್ನು ಉದ್ಘಾಟಿಸಿದ ಡಿಸಿಎಂ

ಬೆಂಗಳೂರು:

ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಸಾಕಷ್ಟು ಕಡೆಗಣಿಸಲಾಗಿತ್ತು. ಆದರೆ, ಕೋವಿಡ್‌ ಮಹಾಮಾರಿ ವಕ್ಕರಿಸಿದ ನಂತರ ಈ ಕ್ಷೇತ್ರದ ಮಹತ್ವದ ಎಲ್ಲರಿಗೂ ಗೊತ್ತಾಯಿತಲ್ಲದೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕ್ಲಿನಿಕ್‌ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ ಯುಗ ಆರಂಭವಾಗಲಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರದಂದು ಬನ್ನೇರುಘಟ್ಟ ರಸ್ತೆ ಯ ಕೃಷ್ಣ ಕುಟೀರದ ಸಮೀಪ ಸ್ಥಾಪಿಸಲಾಗಿರುವ ಶ್ರೀ ಸಾಯಿರಾಮ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು; ವೈದ್ಯರೆಲ್ಲರೂ ನಗರ ಪ್ರದೇಶಗಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಆರೋಗ್ಯ ಸೇವೆಯಲ್ಲಿ ನಗರ-ಗ್ರಾಮೀಣ ಪ್ರದೇಶಗಳ ನಡುವೆ ಕಂದಕ ಸೃಷ್ಟಿಯಾಗಿದೆ. ಕೋವಿಡ್‌ ನಂತರ ಈ ಕಂದಕ ಬಹುತೇಕ ನಿವಾರಣೆಯಾಗುತ್ತಿದ್ದು, ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹೆಚ್ಚಿದಂತೆಲ್ಲ ಡಿಜಿಟಲ್‌ ಕನ್ಸಲ್‌ಟೇಶನ್‌ ಜನಪ್ರಿಯವಾಗುತ್ತಿದೆ. ರೋಗಿ ಎಲ್ಲೇ ಇದ್ದರೂ ಆನ್‌ಲೈನ್‌ ಮೂಲಕವೇ ಚಿಕಿತ್ಸೆಯನ್ನು ಪಡೆಯಬಹುದು. ಹಿಂದೆ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈಗ ಅವಕಾಶ ಕಲ್ಪಿಸಲಾಗಿದೆ ಎಂದರು.

ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಇಪ್ಪತ್ತು ನಾಲ್ಕು ಗಂಟೆ ವಿದ್ಯುತ್‌ ಹಾಗೂ ಹೈಸ್ಪೀಡ್‌ ಇಂಟರ್‌ನೆಟ್‌ ಕನೆಕ್ಟಿವಿಟಿ ಅಗತ್ಯ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ ಎಂದು ಡಿಸಿಎಂ ನುಡಿದರು.

ಆರೋಗ್ಯ ಕ್ಷೇತ್ರ ಕಡೆಗಣನೆ ಇಲ್ಲ:

“ನಾವು ರಸ್ತೆ, ನೀರು, ವಿದ್ಯುತ್‌ ಮತ್ತಿತರೆ ಮೂಲಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿ ಮಾತನಾಡುತ್ತೇವೆ. ಸರಕಾರಗಳು ಕೂಡ ಇಂಥ ವಿಷಯಗಳಿಗೇ ಹೆಚ್ಚು ಆದ್ಯತೆ ನೀಡಿವೆ ನಿಜ. ಆದರೆ, ಆರೋಗ್ಯ ಕ್ಷೇತ್ರಕ್ಕೂ ಇಷ್ಟೇ ಮಹತ್ವ ನೀಡಲೇಬೇಕು. ಈ ಅಂಶವನ್ನು ರಾಜ್ಯ ಸರಕಾರ ಮನಗಂಡಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದರು.

ಕೋವಿಡ್‌ ಬಂದಾಗ ನಮ್ಮಲ್ಲಿದ್ದ ಆರೋಗ್ಯ ವ್ಯವಸ್ಥೆಯ ಶಕ್ತಿ ಏನೆಂಬುದರ ಅರಿವಾಯಿತು. ಸರಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳ ಮಾತಿರಲಿ ಸಾಮಾನ್ಯ ಬೆಡ್‌ಗಳೇ ಇಲ್ಲದಂಥ ಪರಿಸ್ಥಿತಿ ಇತ್ತು. ಆಕ್ಸಿಜನ್‌ ಸೌಲಭ್ಯ, ಎಮರ್ಜೆನ್ಸಿ ಸೌಲಭ್ಯ ಹೀಗೆ ಯಾವುದೇ ಸೌಲಭ್ಯ ಬೇಕಾದರೂ ಜನರು ಹುಡುಕಾಡುವ ಸನ್ನಿವೇಶ ಇತ್ತು. ಈಗ ಅಂಥ ಸಮಸ್ಯೆಗಳೇ ಇಲ್ಲ. ಎಲ್ಲ ಆಸ್ಪತ್ರೆಗಳಿಗೂ ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ, ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಅರೆವೈದ್ಯ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಡಿಸಿಎಂ ನುಡಿದರು.

ಯುರೋಪ್‌ ಉದಾಹರಣೆ:

ರಾಜ್ಯದಲ್ಲಿ ಕೋವಿಡ್‌ ಹಾವಳಿ ಹೆಚ್ಚಿದಾಗ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ಮೂರ್ನಾಲ್ಕು ಲಕ್ಷಕ್ಕೂ ಹೆಚ್ಚು ವಿದೇಶಿ ನಾಗರೀಕರು ತಮ್ಮ ಸ್ವದೇಶಗಳಿಗೆ ವಾಪಸ್‌ ಹೋದರು. ಇಲ್ಲಿ ನಮ್ಮ ಪ್ರಾಣಕ್ಕೆ ರಕ್ಷಣೆ ಇಲ್ಲ ಎಂಬ ಭಾವನೆ ಅವರಲ್ಲಿತ್ತು. ಅದೇ ಯುರೋಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯಾವ ವಿದೇಶಿ ನಾಗರೀಕರೂ ಅಲ್ಲಿಂದ ಕದಲಿಲ್ಲ. ಅಲ್ಲಿನ ಆರೋಗ್ಯ ವ್ಯವಸ್ಥೆಯ ಮೇಲೆ ಅವರಿಗೆ ಗಾಢವಾದ ನಂಬಿಕೆ ಇತ್ತು. ಅಂಥದ್ದೇ ನಂಬಿಕೆ ಮತ್ತು ಭರವಸೆಯನ್ನು ನಾವು ಸೃಷ್ಟಿ ಮಾಡಬೇಕಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಯಾವುದೇ ಕಾರಣಕ್ಕೂ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಬಾರದು ಎಂಬುದು ನಮ್ಮ ಸರಕಾರದ ಬದ್ಧತೆ. ಸಮಾಜವನ್ನು ಕಾಪಾಡಿಕೊಳ್ಳಬೇಕಾದರೆ ಆರೋಗ್ಯ ಕ್ಷೇತ್ರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದೆ ಮಾತ್ರವಲ್ಲದೆ, ಮಾನವ ಸಂಪನ್ಮೂಲ ಕೊರತೆ ಆಗದಂತೆ ನೋಡಿಕೊಂಡಿದೆ. ಜತೆಗೆ; ವೈದ್ಯಕೀಯ ಕೋರ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ದೊಡ್ಡ ಪ್ರಮಾಣದ ಅವಕಾಶ ಮಾಡಿಕೊಡಲಾಗಿದೆ ಎಂದು ಡಿಸಿಎಂ ನುಡಿದರು.

ಕರ್ನಾಟಕ ಅವಕಾಶಗಳ ಹೆಬ್ಬಾಗಿಲು:

ಕೋವಿಡ್‌ ನಂತರ ಕರ್ನಾಟಕವನ್ನು ಇಡೀ ಜಗತ್ತು ಅಮೆರಿಕವನ್ನು ನೋಡುವಂತೆ ನೋಡತ್ತಿದೆ. ಹಿಂದೆ ನಮ್ಮ ದೇಶದ ಜನರು ಅವಕಾಶಗಳಿಗಾಗಿ ಅಮೆರಿಕದತ್ತ ನೋಡುತ್ತಿದ್ದರು. ಈಗ ಕರ್ನಾಟಕದತ್ತ ನೋಡುತ್ತಿದ್ದಾರೆ. ಇಡೀ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಅನೇಕ ಪ್ರತಿಭಾವಂತರು ಬೆಂಗಳೂರಿಗೆ ಧಾವಿಸಿ ಬರುತ್ತಿದ್ದಾರೆ ಎಂದು ಡಿಸಿಎಂ ಹೇಳಿದರು.

ಶಾಸಕ ಸತೀಶ್‌ ರೆಡ್ಡಿ, ಖ್ಯಾತ ಹೃದ್ರೋಗ ತಜ್ಞ ವಿವೇಕ್‌ ಜವಳಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಕೆನರಾ ಬ್ಯಾಂಕ್‌ ಅಧಿಕಾರಿ ನಯನ, ಬಿಬಿಎಂಪಿ ಮಾಜಿ ಸದಸ್ಯರಾದ ಮುರಳಿ, ಪುರುಷೋತ್ತಮ್, ಭಾಗ್ಯಲಕ್ಷ್ಮೀ ಹಾಗೂ ಡಾ.ವಿವೇಕಾನಂದ, ವಿಷ್ಣುಭಟ್‌, ಡಾ.ಬಾಲಕೃಷ್ಣ ಭಟ್‌, ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಗ್ರೇಟಾ ಥನ್‌ಬರ್ಗ್‌ರ “ಟೂಲ್‌ಕಿಟ್” ಹಂಚಿಕೊಂಡಿದ್ದಕ್ಕಾಗಿ 21 ವರ್ಷದ ಕಾರ್ಯಕರ್ತನನ್ನು ಬೆಂಗಳೂರಿನಲ್ಲಿ ಬಂಧನ
Next: ಕೊನೆಗೂ ಮಹಾರಾಷ್ಟ್ರದ ಧ್ವನಿ ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ!

Related Stories

ksp-fraud-investigation-order
  • Uncategorized

ವಂಚನೆ ಪ್ರಕರಣಗಳ ತನಿಖೆಗೆ ₹1 ಕೋಟಿ ಮಿತಿ: PSI ಅಥವಾ PI ಹಂತ ನಿಗದಿಪಡಿಸಿದ ಕರ್ನಾಟಕ ಪೊಲೀಸ್

The Bengaluru Live November 15, 2026 11:04 PM
hdk-ramanagara-temple-visit
  • Uncategorized

ರಾಮನಗರ ಕೈಬಿಟ್ಟಿಲ್ಲ, ರಾಜ್ಯ ರಾಜಕಾರಣ ವಾಪಸ್ಸಾತಿ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‌ಡಿ ಕುಮಾರಸ್ವಾಮಿ

The Bengaluru Live November 15, 2026 10:51 PM
jayamma-hassan-elephant-attack
  • Uncategorized

ಹಾಸನ ಜಿಲ್ಲೆಯ ಚೌಡಹಳ್ಳಿಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವು; ಶವ ಹಸ್ತಾಂತರಕ್ಕೆ ಪ್ರತಿಭಟನೆ, ವಿಳಂಬ

The Bengaluru Live November 15, 2026 10:32 PM

Latest Post

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

November 18, 2026 2:02 PM
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

The Bengaluru Live November 18, 2026 2:02 PM
ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ
  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
©Copyright 2025 The Bengaluru Live All rights reserved. | MoreNews by AF themes.