Home ಬೆಂಗಳೂರು ನಗರ Jayanagar Assembly Constituency: ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ಶಾಸಕ...

Jayanagar Assembly Constituency: ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ಶಾಸಕ ಸಿಕೆ ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್

19
0
Soumya Reddy's petition seeking election of Jayanagar MLA: High Court summons to MLA CK Ramamurthy
Soumya Reddy's petition seeking election of Jayanagar MLA: High Court summons to MLA CK Ramamurthy
Advertisement
bengaluru

ಬೆಂಗಳೂರು:

ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ವಿಜೇತ ಅಭ್ಯರ್ಥಿ ಶಾಸಕ ಸಿ.ಕೆ. ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ರಾಚಯ್ಯ ರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸಿ.ಕೆ. ರಾಮಮೂರ್ತಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ —ಮತಯಂತ್ರದ ಮತಗಳ‌ ಎಣಿಕೆಯಲ್ಲಿ ತಾನು ಮುನ್ನಡೆ ಸಾಧಿಸಿದ್ದೆ, ಆದರೆ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಸೌಮ್ಯ ರೆಡ್ಡಿ ಚುನಾವಣಾ ತಕರಾರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

bengaluru bengaluru

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ರಾಚಯ್ಯ ರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸಿ.ಕೆ.ರಾಮಮೂರ್ತಿ ಸೇರಿದಂತೆ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೆ ಆದೇಶಿಸಿದ್ದು ಸೆ.7 ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.


bengaluru

LEAVE A REPLY

Please enter your comment!
Please enter your name here