Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • ಜಯನಗರದಲ್ಲಿ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಚಾಲನೆ
  • ಬೆಂಗಳೂರು ನಗರ
  • ಆರೋಗ್ಯ

ಜಯನಗರದಲ್ಲಿ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಚಾಲನೆ

The Bengaluru Live July 11, 2021 2:00 PM 1 minute read
Sputnik V vaccination begins at United Hospital in Jayanagar

ಜಯನಗರದಲ್ಲಿ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಚಾಲನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕರೋನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಆರೋಗ್ಯ ಸಚಿವ ಸುಧಾಕರ್‌

ಆರೋಗ್ಯ ಕ್ಷೇತ್ರದಲ್ಲಿ ದೇಶದಲ್ಲೇ ಮಾದರಿ ರಾಜ್ಯವಾಗಲು ಖಾಸಗಿ ಆಸ್ಪತ್ರೆಗಳ ಸಹಕಾರ ಅಗತ್ಯ

ಬೆಂಗಳೂರು:

ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು, ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕರೋನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ. ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೋನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

Sputnik V vaccination begins at United Hospital in Jayanagar

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಜಯನಗರ ಭಾಗದಲ್ಲಿ ಮತ್ತೊಂದು ನೂತನ ಆಸ್ಪತ್ರೆ ಪ್ರಾರಂಭವಾಗುತ್ತಿರುವುದು ಬಹಳ ಸಂತಸದ ವಿಷಯ. ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆ ಸೌಲಭ್ಯಗಳ ದೊರೆಯದೆ ಇದ್ದಂತಹ ಸಂಧರ್ಭದಲ್ಲಿ ಇದರ ಮಹತ್ವವನ್ನು ನಾವು ತಿಳಿದುಕೊಂಡಿದ್ದೇವೆ. ಹೆಲ್ತ್‌ ಕಾರ್ಡ್ ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಇಲ್ಲಿನ ವೈದ್ಯಕೀಯ ಮಂಡಳೀ ನೀಡಿರುವುದು ಸಂತಸದ ವಿಷಯ ಎಂದರು.

Sputnik V vaccination begins at United Hospital in Jayanagar

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ ಮಾತನಾಡಿ, ಯುನೈಟೆಡ್‌ ಆಸ್ಪತ್ರೆ ಕಲಬುರಗಿಯಲ್ಲಿ ಹಾಗೂ ಹೈದ್ರಬಾದ್‌ ಕರ್ನಾಟಕ ಭಾಗದಲ್ಲಿ ಕರೋನಾ ಸಾಂಕ್ರಾಮಿಕ ಸಂಧರ್ಭದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದೆ. ಬೆಂಗಳೂರು ಹೊರತುಪಡಿಸಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದ ರಾಜ್ಯದ ಮೊದಲ ಖಾಸಗಿ ಆಸ್ಪತ್ರೆ ಎನ್ನುವುದು ಇದರ ಹೆಗ್ಗಳಿಕೆ. ಚಿಕಿತ್ಸೆ ಮೊದಲು ಎನ್ನುವ ಧ್ಯೇಯ ವಾಕ್ಯದ ಮೂಲಕ ಉತ್ತಮ ಚಿಕಿತ್ಸೆಯನ್ನು ಯುನೈಟೆಡ್‌ ಆಸ್ಪತ್ರೆಯ ತಂಡ ನೀಡಿರುವುದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಯುನೈಟೆಡ್‌ ಆಸ್ಪತ್ರೆಯ ಸಿಎಂಡಿ ಡಾ ವಿಕ್ರಮ್‌ ಸಿದ್ದಾರೆಡ್ಡಿ, ಮಾಜಿ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವೆ ಪಿಜಿಆರ್‌ ಸಿಂಧ್ಯಾ, ಶಾಸಕ ಪಿ ರಾಜೀವ, ಯುನೈಟೆಡ್‌ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಅವರಿಗೆ, ಆಸ್ಪತ್ರೆಯ ನಿರ್ದೇಶಕರಾದ ಶ್ರೀಮತಿ ಡಾ. ವೀಣಾ ವಿಕ್ರಮ್‌ ಸಿದ್ಧಾರೆಡ್ಡಿ ಹಾಗೂ ಡಾ. ರಾಜೀವ್‌ ಬಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ
Next: ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ, ಅದು ನಮ್ಮ ಪ್ರೀತಿಯ ಸಂಬಂಧ; ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Related Stories

ವಿಶ್ವ ಹಿಂದೂ ಕಾಂಗ್ರೆಸ್ 2026 ಬ್ಯಾನರ್‌ಗಳ ಮುಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸ್ವಾಮಿ ವಿಜ್ಞಾನಾನಂದ
  • ಬೆಂಗಳೂರು ನಗರ

ವಿಶ್ವ ಹಿಂದೂ ಕಾಂಗ್ರೆಸ್ 2026 ಡಿಸೆಂಬರ್ 18-20ರಂದು ಮುಂಬೈನಲ್ಲಿ: ಬೆಂಗಳೂರಿನಲ್ಲಿ ಸ್ವಾಮಿ ವಿಜ್ಞಾನಾನಂದ ಮಾಹಿತಿ

The Bengaluru Live November 23, 2026 3:01 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 1:26 PM
ನೇರಳೆ ಬಣ್ಣದ ಅಂಗಿ ಧರಿಸಿ ಕೈಕಟ್ಟಿ ಮೇಜಿನ ಬಳಿ ಕುಳಿತು ಮಾತನಾಡುತ್ತಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ

The Bengaluru Live November 23, 2026 12:10 PM

Latest Post

ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ ಯರೇಹಳ್ಳಿಯ ಸಾರ್ವಜನಿಕ ಸಭೆಯಲ್ಲಿ ಟೆಂಟ್‌ನಡಿ ಕುಳಿತ ಜನಸಮೂಹದ ಮುಂದೆ ವೇದಿಕೆಯ ಪೋಡಿಯಂನಿಂದ ಮಾತನಾಡುತ್ತಿರುವ ಸಚಿವರು
  • ಕರ್ನಾಟಕ
  • ಶಿಕ್ಷಣ

ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

November 23, 2026 4:10 PM
ವಿಶ್ವ ಹಿಂದೂ ಕಾಂಗ್ರೆಸ್ 2026 ಡಿಸೆಂಬರ್ 18-20ರಂದು ಮುಂಬೈನಲ್ಲಿ: ಬೆಂಗಳೂರಿನಲ್ಲಿ ಸ್ವಾಮಿ ವಿಜ್ಞಾನಾನಂದ ಮಾಹಿತಿ ವಿಶ್ವ ಹಿಂದೂ ಕಾಂಗ್ರೆಸ್ 2026 ಬ್ಯಾನರ್‌ಗಳ ಮುಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸ್ವಾಮಿ ವಿಜ್ಞಾನಾನಂದ
  • ಬೆಂಗಳೂರು ನಗರ

ವಿಶ್ವ ಹಿಂದೂ ಕಾಂಗ್ರೆಸ್ 2026 ಡಿಸೆಂಬರ್ 18-20ರಂದು ಮುಂಬೈನಲ್ಲಿ: ಬೆಂಗಳೂರಿನಲ್ಲಿ ಸ್ವಾಮಿ ವಿಜ್ಞಾನಾನಂದ ಮಾಹಿತಿ

November 23, 2026 3:01 PM
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ಸದನದಲ್ಲಿ ಬಿಸಿ ಮುಟ್ಟಿಸುತ್ತೇವೆ: ಬಿ.ವೈ.ವಿಜಯೇಂದ್ರ ಶಿವಮೊಗ್ಗದಲ್ಲಿ ಬಿಜೆಪಿ ಸಭೆಯಲ್ಲಿ ಮೈಕ್ ಹಿಡಿದು ಮಾತನಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
  • ಕರ್ನಾಟಕ
  • ರಾಜಕೀಯ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ಸದನದಲ್ಲಿ ಬಿಸಿ ಮುಟ್ಟಿಸುತ್ತೇವೆ: ಬಿ.ವೈ.ವಿಜಯೇಂದ್ರ

November 23, 2026 2:29 PM
ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 1:26 PM
ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ ಸಚಿವರ ಗೃಹ ಕಚೇರಿಯ ಹೊರಗೆ ಬಿಸಿಯೂಟ ನೌಕರರ ಯೂನಿಯನ್ ನಿಯೋಗದ ಸದಸ್ಯರೊಂದಿಗೆ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಶಿಕ್ಷಣ

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

November 23, 2026 1:21 PM
ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ ನೇರಳೆ ಬಣ್ಣದ ಅಂಗಿ ಧರಿಸಿ ಕೈಕಟ್ಟಿ ಮೇಜಿನ ಬಳಿ ಕುಳಿತು ಮಾತನಾಡುತ್ತಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ

November 23, 2026 12:10 PM

ನೀವು ತಪ್ಪಿಸಿಕೊಂಡಿರಬಹುದು

ಯರೇಹಳ್ಳಿಯ ಸಾರ್ವಜನಿಕ ಸಭೆಯಲ್ಲಿ ಟೆಂಟ್‌ನಡಿ ಕುಳಿತ ಜನಸಮೂಹದ ಮುಂದೆ ವೇದಿಕೆಯ ಪೋಡಿಯಂನಿಂದ ಮಾತನಾಡುತ್ತಿರುವ ಸಚಿವರು
  • ಕರ್ನಾಟಕ
  • ಶಿಕ್ಷಣ

ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

The Bengaluru Live November 23, 2026 4:10 PM
ವಿಶ್ವ ಹಿಂದೂ ಕಾಂಗ್ರೆಸ್ 2026 ಬ್ಯಾನರ್‌ಗಳ ಮುಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸ್ವಾಮಿ ವಿಜ್ಞಾನಾನಂದ
  • ಬೆಂಗಳೂರು ನಗರ

ವಿಶ್ವ ಹಿಂದೂ ಕಾಂಗ್ರೆಸ್ 2026 ಡಿಸೆಂಬರ್ 18-20ರಂದು ಮುಂಬೈನಲ್ಲಿ: ಬೆಂಗಳೂರಿನಲ್ಲಿ ಸ್ವಾಮಿ ವಿಜ್ಞಾನಾನಂದ ಮಾಹಿತಿ

The Bengaluru Live November 23, 2026 3:01 PM
ಶಿವಮೊಗ್ಗದಲ್ಲಿ ಬಿಜೆಪಿ ಸಭೆಯಲ್ಲಿ ಮೈಕ್ ಹಿಡಿದು ಮಾತನಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
  • ಕರ್ನಾಟಕ
  • ರಾಜಕೀಯ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ಸದನದಲ್ಲಿ ಬಿಸಿ ಮುಟ್ಟಿಸುತ್ತೇವೆ: ಬಿ.ವೈ.ವಿಜಯೇಂದ್ರ

The Bengaluru Live November 23, 2026 2:29 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 1:26 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ
  • ವಿಶ್ವ ಹಿಂದೂ ಕಾಂಗ್ರೆಸ್ 2026 ಡಿಸೆಂಬರ್ 18-20ರಂದು ಮುಂಬೈನಲ್ಲಿ: ಬೆಂಗಳೂರಿನಲ್ಲಿ ಸ್ವಾಮಿ ವಿಜ್ಞಾನಾನಂದ ಮಾಹಿತಿ
  • ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ಸದನದಲ್ಲಿ ಬಿಸಿ ಮುಟ್ಟಿಸುತ್ತೇವೆ: ಬಿ.ವೈ.ವಿಜಯೇಂದ್ರ
  • ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
©Copyright 2025 The Bengaluru Live All rights reserved. | MoreNews by AF themes.